ಮಾತು ಬರದ ಮೌನಕ್ಕೆ ಕನಸಾದ ಬಗೆಯ ಒಂದು ಚಿಕ್ಕ ಕನಸಿನ ಕತೆ. ಹುಚ್ಚುಕೋಡಿಯ ತಲೆಯೊಳಗೆ ಚಿಕ್ಕದೊಂದು ಆಸೆಯ ಭಾವ, ಬಯಸುವ ಮನಸ್ಸಲ್ಲಿ, ನೆನೆಯುತ ಮಲಗಿದಲ್ಲಿ ಬೀಳುವುದು; sometime ಕಾಣೋದು ಅದೇ ಕನಸು, ಭ್ರಮಿಸಿಕೊಳ್ಳೋದು ಅದೇ ಅಂದರೂ ತಪ್ಪಾಗದು. ನಾವು ಎಂತಹ ಮರೆಗುಳಿ ವಂಶದವರೆಂದರೆ ಒಮ್ಮೊಮ್ಮೆ ಒಂದು ವಿಚಾರದ ಬಗ್ಗೆ ಚಿಂತಿಸಿ ನಿರ್ಧಾರ ತೆಗೆದುಕೊಳ್ಳಲು ಹಾಗೆ ಕಣ್ಮುಚ್ಚಿ ಕುಳಿತು ಧ್ಯಾನಸ್ಥ ಸ್ಥಿತಿ ತಲುಪಿ ಆದರೆ-ಹೋದರೆ ಎಂಬ ಆಗು-ಹೋಗುಗಳ ಹತ್ತು ವಿಚಾರಗಳಲ್ಲಿ ಮುಳುಗಿ ನೈಜ ವಾಸ್ತವದ ವಿಚಾರ ಮರೆತು ಹೊಸದಾಗಿ ಬಂದ ಯೋಚನೆಗಳಿಗೊಂದು ಅಂತ್ಯ ಹಾಡಲು ಉದ್ಯುಕ್ತರಾಗಿ ಬಿಡುತ್ತೇವೆ. ಇಂತಹ ಪರಿಸ್ಥಿತಿಯಲ್ಲಿ ದಾಸರ ಒಂದು ಹಾಡು ನೆನಪಿಗೆ ಬರುತ್ತದೆ - ಈ ಮಾನವರು ಹೇಳುವುದು ಒಂದು ಮಾಡುವುದು ಇನ್ನೊಂದು ನಂಬೋದು ಹೇಗೆ ಕಾಣೆ ಪದ್ಮಾವತಿ ಪತಿ ತಿರುಪತಿ ಶ್ರೀವೆಂಕಟಚಲಪತಿ.. ಅಂತ.
ಒಮ್ಮೊಮ್ಮೆ ನನ್ನೊಳಗಿನ ಕಿಚ್ಚು ಹುಚ್ಚು ಅನಿಸಿಬಿಡುತ್ತದೆ. ಮನದೊಳಗೆ ಮೂಡಿದ ಭಾವನೆಗಳೂ ಭಾರ ಎನಿಸಿಬಿಡುತ್ತದೆ. ಮಾತಾಡುವ ವಾಚಾಳಿಯ ನಾಲಿಗೆ ಕೂಡ ಹೊರಳಲು ನರಳುತ್ತದೆ ಒಮ್ಮೊಮ್ಮೆ ತಾನಾಗಿ ಶಕ್ತಿ ತುಂಬಲು ಬಂದ ಉಸಿರನೂ ಕೂಡ ಹೊರದಬ್ಬಲು ಕಷ್ಟವೆನಿಸಿಬಿಡುತ್ತದೆ. ಅತ್ತು ಬಿಟ್ಟು ಈ ತನುವಿನ ಕಷ್ಟ ಕಳೆಯೋಣವೆಂದರೆ ಹಾಳಾದ ಕಣ್ಣಿರು ಕೂಡ strike ಮಾಡಿಬಿಡುತ್ತದೆ. ಒಮ್ಮೊಮ್ಮೆ ನಮ್ಮೊಳಗಿನ ನಾನೆಂಬ ಸ್ವಾರ್ಥದ ಸ್ವಾಭಿಮಾನ ಹೆಮ್ಮೆ ಎನಿಸುತ್ತದೆ. ಒಮ್ಮೊಮ್ಮೆ ಸಂಗಾತಿ ಜೊತೆಗಾರನಿಲ್ಲವೆಂದು ಮರುಗುವ ಮನಸ್ಸು ಸುತ್ತಣ ಸಂಸಾರದ ಸಂಘರ್ಷಗಳ ನೋಡಿ single life has great comfort ಎಂದು ಎದೆಯುಬ್ಬಿಸಿ ತನ್ನೊಳಗೆ ಬೀಗಿಬಿಡುತ್ತದೆ. ಒಮ್ಮೊಮ್ಮೆ ಸತ್ಯ ಒಪ್ಪಿಕೊಳ್ಳಲು ಮನಸಾಲಾಗದೆ ಮಿಥ್ಯವೆಂದು ಸಾಧಿಸಿಬಿಡೋಣ ಎಂದೂ ಅನಿಸುವುದುಂಟು. ಒಮ್ಮೊಮ್ಮೆ ತೀರಾ ಚಿಕ್ಕ -ಪುಟ್ಟ ಗೆಲುವಿಗೂ ನಲಿಯುವ ಮನಸ್ಸು ದೊಡ್ಡ ಗೆಲುವಾದರೂ ಅಂತರ್ಮುಖಿಯಾಗಿಬಿಡುತ್ತದೆ. ಒಮ್ಮೊಮ್ಮೆ ಜೀವನ ಸಹಜ -ಸುಂದರ, ಅದ್ಭುತ!!. ಈ ಸಂಬಂಧ - ಬಾಂಧವ್ಯಗಳು ಎಷ್ಟು ಖುಷಿಯಾಗಿಸುತ್ತಪ್ಪಾ ಎಂದು ಉಬ್ಬಿ ಬಿಡುವ ನಾವುಗಳು; ಒಮ್ಮೊಮ್ಮೆ ತುಂಬಾ ವೇದಾಂತಿ ತತ್ವಜ್ಞಾನಿಯಂತೆ ಏನಿದೆ ಜೀವನದಲ್ಲಿ ಹುಟ್ಟು-ಸಾವುಗಳು ನಡುವಲ್ಲಿ ಸ್ವಲ್ಪದಿನ(ಜಟಕಾಬಂಡಿ) ಒಂದಷ್ಟು ಸ್ವಾರ್ಥ ದುರಾಸೆಗಳ ಜಂಜಾಟದ ಜಗಳಗಳು, ತುತ್ತಿಗಾಗಿ ಒಂದಷ್ಟು ಓದು - ನೌಕರಿ - ಪೆನ್ಷನ್ - ಲೈಫ್ settlement ಹೀಗೆ ಒಂದಷ್ಟು ಬದುಕಿನ ಹೋರಾಟ. ಇಷ್ಟಾದ ಮೇಲೂ ಈ ಜೀವನ ನಶ್ವರ; ಒಮ್ಮೊಮ್ಮೆ ನಾವು ಮನುಷ್ಯರಾಗಿದ್ದೇವೆ, ನಮಗೆ ನಮ್ಮದೇ ಒಂದಷ್ಟು ಸ್ವಾತಂತ್ರ್ಯ, ಮಾತುಗಳು ಬರ್ತಾವೆ, ಹಲವು ಭಾಷೆಗಳಲ್ಲಿ ಬರಿತೇವೆ, ಟೆಕ್ನಾಲಜಿ ಬೆಳೆಸಿದ್ದೇವೆ, ಕಂಪ್ಯೂಟರ್, ಮೊಬೈಲ್, ಉಪಗ್ರಹಗಳು ಅದೂ ಇದೂ ಒಂದಷ್ಟು ಮಣ್ಣು ಮಸಿ ಕಲ್ಪಿಸಿಕೊಂಡು ನಾವು ಲಕ್ಕಿಗಳು, ಬುದ್ದಿಜೀವಿ, ಶ್ರೇಷ್ಟರು ಎಂದು ಬಿರುದು ಕೊಟ್ಟು ಕೊಂಡು ಬಿಡುತ್ತೇವೆ. ಒಮ್ಮೊಮ್ಮೆ ಏನಪ್ಪಾ..??! ನಾವು ಒಂಥರಾ ಅವಲಕ್ಕಿಗಳೇ!! ಎಲ್ಲೆಡೆಯೂ ಸ್ವಾರ್ಥ, ಮೋಸ, ಕಪಟತನ, ಈ ಹೊಲಸು ಪ್ರಾಣಿಗೆ ಇರುವಷ್ಟು ದುರಾಸೆ ಬೇರಾವ ಜೀವ ಪ್ರಭೇದಗಳಲ್ಲು ಇಲ್ಲವೆಂದೆನಿಸಿ ನಾವೇ ಹುಂಬರು, ಮೂರ್ಖರು ಎಂದೆನಿಸುವುದೂ ಉಂಟು.
ಆಸೆಗಳು ಆಕಾಶದ ಹಾಗೆ. ಹಿಡಿಯಲಾಗದ ಹೊಳೆಯುವ ಗಂಟು. ಅದಕ್ಕಾಗಿಯೆ ಜನ ಆಕಾಶ ನೋಡಿ ಹತ್ತು ಹಲವು ಕಲ್ಪಿಸಿಕೊಂಡು ಕನಸಿನ ಪುಷ್ಪಕ ಕಟ್ಟುತ್ತಾರೆ. ತಾರೆಗಳ ಜೊತೆ, ಚಂದ್ರನ ಜೊತೆ ಸೇರುವ ಗೆಳೆತನದ ಅನುಭೂತಿಯ ಭಾವ ಹೊಂದುತ್ತಾರೆ. ಕಲ್ಪನೆಯ ಪ್ರೀತಿಸಿ, ಮೋಹಿಸುತ ಆರಾಧಿಸಿ ಕನಸಿನ ಬೃಂಗವ ಏರಿ ಕವಿ ಎನಿಸಿಕೊಂಡುಬಿಡುತ್ತಾರೆ. ರಕ್ತ ಒತ್ತುವ ಹೃದಯದಲ್ಲಿ ರಂಗೋಲಿ ಬರೆದು ಅವರು ಬಯಸುವ ಪ್ರೇಮದ ವಸ್ತುವ ಬರಮಾಡಿ ಕಲ್ಪನೆಯ ಕನಸಲ್ಲಿ ಕಳೆದುಹೋಗುತ್ತಾರೆ. ಅಯ್ಯೋ.. !!! ಸಾಕಲ್ಲವೇ?? ಎಷ್ಟು ಅಂತ ಕಲ್ಪಿಸಿಕೊಂಡು ಕನಸ್ ಕಾಣೋದ್ ಹೇಳಿ?? ಕೆಲಸವಿಲ್ಲದಿದ್ರೆ ಆಗೋದ್ ಇದೆ ಅಲ್ಲವೇ ?? ಮತ್ತೇನಾಗುತ್ತೆ??
ಹಸಿರಾಗಿರಲಿ ಬದುಕು ಖುಷಿಯಲ್ಲಿ ಕರಗಿ..
ನೂರ್ಮಡಿಸಿ ಚಿಮ್ಮುತಿರಲಿ ಕನಸುಗಳ ಹುಚ್ಚಾಸೆಯ ಅಲೆಗಳು...
ಒಂದು ಪುಟ್ಟ ಆಸೆಯ
ಕನಸು
ಕನಸೊಳಗೆ ಕನಸುಗಳಿಗೆ
ಕಾವ್ ಕೊಟ್ಟು
ಹೊಸದತ್ತು ಕನಸುಗಳ
ಹುಟ್ಟಾಕಿ ಕನಸಲ್ಲಿ
ಆ ಕನಸಲ್ಲಿ ಹೊಸ
ಆಸೆಯ ಕನಸಿನ ಬೀಜ
ತಂತಾನೆ ಮೊಳೆತು ಸಸಿಯಾಗಿ
ಗಳಿಗೆಗಳಿಗೆಗಳೊಳಗೆ ಬೆಳೆಬೆಳೆದು
ಹೆಮ್ಮರವಾಗಿ ಆ ಕನಸೇ
ತನ್ನೊಳಗೆ ತನ್ನ ಕನಸನು
ಬೆಳೆಸುವ ಹುಚ್ಚಾಸೆಯ
ಇನ್ನೊಂದು ಕನಸನು ಕಂಡು
ಕಣ್ತೆರೆವ ಮನಸಿರದೆ
ಕನಸಾಗುತಿರುವಾಗ
ವಾಸ್ತವದ ನೆನಪ ಬರಿಸಿತು
ನನ್ನ ಹಿತ ಬಯಸುವ ಶತ್ರು
ಅಲರಾಂನ ಗಂಟೆ ಹೊಡೆದುಕೊಳ್ಳಬೇಕೆ??!!
ಗಂಟೆ ಏಳಾಯಿತು ಎಂದು
ಪಕ್ಕದ ಮನೆಯ ಆಂಟಿ
ಟ್ಯೂಶನ್ ಗೆ ಮಗನ ಕಳಿಸಿ
ಟಾಟಾ ಮಾಡುವ ಸೌಂಡು ಕಿವಿಗೆ
ಅಪ್ಪಳಿಸಿದಾಗಲೇ ನೆನಪಾದ್ದು
Sunday ಅಲ್ಲ ಇಂದು Monday ಎಂದು .
HaPPy TiMeS....
EnJoY ThE SwEeT DrEaMs..
ನಿಮ್ಮ ಕನಸುಗಳ ಮೌನ ತುಂಬಾ ಸೊಗಸಾಗಿದೆ.
ReplyDeleteಉಷಾ ಡಿಯರ್...
Deleteಮೌನದಲ್ಲೇ ಕನಸಾಗುವುದು ಹೆಚ್ಚು.. ಖುಷಿ ಕೊಡುವುದೂ ಅವಾಗಲೇ..
ಕಲ್ಪನೆಗಳು, ಚಿತ್ರಗಳು, ಹೂವುಗಳು, ಹಕ್ಕಿಗಳು, ನಕ್ಷತ್ರಗಳು... ಇವೆಲ್ಲ ಒಂಥರಾ ಮೌನದಲ್ಲಿ ಅಪರೂಪದ ಅನುಭೂತಿ ಮೂಡಿಸುತ್ತವೆ..
ಒಮ್ಮೊಮ್ಮೆ ನೆನಪಾಗುತಾವೆ.. ಕನಸಾಗುತಾವೆ..
ಧನ್ಯವಾದ..
chennaagide... tumba ishta aaytu...
ReplyDeleteಧನ್ಯವಾದ ಪ್ರಕಾಶಣ್ಣ...
Deleteಯಾಕೋ ಭಾವುಕ ಮನ ವಾಸ್ತವದಲಿ ಕನಸಿನ ಬೀಜವ ಬಿತ್ತಿ ನನಸಾಗಲಿ ಎಂದು
ಕಾಣದ ದೇವರ ನೆನೆದು;
ಸೋನೆ ಮಳೆ ಸುರಿದರೆ ಸಾಕು ಎಂದು ಮನದೊಳಗೆ ಬೇಡುತ್ತಲ್ಲವಾ..???
ಆ ಮೌನದ ಕನಸೇ ಖುಷಿ...
ಧನ್ಯವಾದ..
ಕನಸುಗಳ ದಿಬ್ಬಣ ಮನದ ಬಾಗಿಲಲಿ....
ReplyDeleteಚಂದದ ಬರಹ...
ಧನ್ಯವಾದ
Deleteಹೀಗೆ ಬರೆದರೆ ಹೇಗೆ!
ReplyDeleteಭಾವ ಮೊಳೆಯುವ ಹಾಗೆ?
ಧನ್ಯವಾದ
Deleteಪದಬೆಸುಗೆ ಇಷ್ಟವಾಯಿತದಕೆ ಕಾರಣವಿಲ್ಲದಿಲ್ಲ.... ಸುಂದರ ಸಾಲುಗಳು...ವೀಣಾ
ReplyDeleteಆಜಾದ್ ಸರ್ ಧನ್ಯವಾದ.. ಆಗಾಗ ಬ್ಲಾಗಿಗೆ ಬೇಟಿ ನೀಡುತ್ತ ಉತ್ತೆಜಿಸುತ್ತಿರಿ. ಧನ್ಯವಾದ..
Deleteಭಾವಗಳಿಗೆ ಬಣ್ಣ ಕಟ್ಟಿ ಬಂದು ನೋಡಿರಯ್ಯ
ReplyDeleteಬಣ್ಣದ ಬದುಕು... ಒಂದಷ್ಟು ಆಸೆಯ ಬೆಳ್ಳಿಯ ಬಣ್ಣ, ಸಿಟ್ಟು ಬೇಸರದ ಕಡು ನೀಲಿ ಬಣ್ಣ, ಪ್ರೇಮ ಲಲಿತ್ಯದ ಕೆಂದಾವರೆಯ ಬಣ್ಣ ಹೀಗೆ ಹಲವು ಖುಷಿಗಳ ತಿಳಿ ಗುಲಾಬಿ ಬಣ್ಣ ,ಬಾಂದವ್ಯದ ಮಮತೆಗಳ ಆಕಾಶ ನೀಲ ಬಣ್ಣ ಹಾಗೆ... ಹಲವು ಬಣ್ಣದ ಕಾಮನ ಬಿಲ್ಲಂತೆ ನಮ್ಮ ಬದುಕು.
Deleteಧನ್ಯವಾದ ರಾಜಶೇಕರರವರೆ..
ಆಗಾಗ ಬರುತ್ತಿರಿ ನಮ್ಮ ಬ್ಲಾಗಿನ ಬಳಿಗೆ