ಮನತುಂಬ ಸವಿಗನಸು
ಎದೆತುಂಬ ಭಾವೋನ್ಮಾದ
ಹೊಸದೆನಿಸಿದೆ ಈ ಜಗವು
ಬಣ್ಣವಾಗುತಿದೆ ಬದುಕು
ಸೊಗಸೆನಿತಿಸುದೆ ಈ ಭೂಮಿ
ಆಪ್ತವೆನಿಸಿವೆ ಸಂಬಂಧಗಳು
ಅನಿಸುತಿದೆ ಬದಲಾವಣೆ
ನನ್ನ ತುಂಬಾ......
ಜೊತೆಗಾರನ ಬಾಂಧವ್ಯ
ಅಭಿಮಾನದಕ್ಕರೆಗಳು
ವಾತ್ಸಲ್ಯದಾಳದ ಮಮತೆ
ಕಣ್ಣು ತುಂಬುವ ಪ್ರೇಮ
ಒಟ್ಟಾಗಿ ಕಟ್ಟಿಕೊಟ್ಟಿವೆ
ನೂರ್ಮಡಿಸುವ
ಗಗನ ಚುಂಬಿಸುವ
ಚೈತನ್ಯ ನನ್ನ ತುಂಬಾ......
ಸತ್ಯ-ಮಿಥ್ಯಗಳ
ಹಿರಿಮೆ-ಅರಿವಿನ ಗೋಜು
ಜಗದಳಲ ಗೊಂದಲಗಳು
ಬೇಡವೆಂದಿದೆ ಅಂತರ್ಯ
ಮರೆತಿರುವೆನೇ ನಾನು
ಜಗದ ಪರಿವ??!!
ಒಲವ ಕಾರ್ಮೋಡ ಕವಿದಿದೆ
ಈಗ ನನ್ನ ತುಂಬಾ......
ಹೃದಯದಲಿ ಪ್ರೀತಿ ಗುಪ್ತಗಾಮಿನಿಯಂತೆ
ಕನವರಿಸುತಲಿ ಹರಿಯುತಿದೆ.
ಬಾನ ಚಂದ್ರನ ಬೇಟಿಗೆ
ಮುಸ್ಸಂಜೆಯಲಿ ಕಡಲು ಹದವಾಗಿ ನಲಿದಂತೆ
ತಲ್ಲಣಿಸಿ ಕಾತರಿಸಿ..
ಅವನು ಬರುವಾ ಹೊತ್ತು
ಹೆಸರಿಲ್ಲದ ಪುಳಕಗಳು
ನನ್ನ ತುಂಬಾ......
ಚೈತನ್ಯ ನನ್ನ ತುಂಬಾ......
ಸತ್ಯ-ಮಿಥ್ಯಗಳ
ಹಿರಿಮೆ-ಅರಿವಿನ ಗೋಜು
ಜಗದಳಲ ಗೊಂದಲಗಳು
ಬೇಡವೆಂದಿದೆ ಅಂತರ್ಯ
ಮರೆತಿರುವೆನೇ ನಾನು
ಜಗದ ಪರಿವ??!!
ಒಲವ ಕಾರ್ಮೋಡ ಕವಿದಿದೆ
ಈಗ ನನ್ನ ತುಂಬಾ......
ಹೃದಯದಲಿ ಪ್ರೀತಿ ಗುಪ್ತಗಾಮಿನಿಯಂತೆ
ಕನವರಿಸುತಲಿ ಹರಿಯುತಿದೆ.
ಬಾನ ಚಂದ್ರನ ಬೇಟಿಗೆ
ಮುಸ್ಸಂಜೆಯಲಿ ಕಡಲು ಹದವಾಗಿ ನಲಿದಂತೆ
ತಲ್ಲಣಿಸಿ ಕಾತರಿಸಿ..
ಅವನು ಬರುವಾ ಹೊತ್ತು
ಹೆಸರಿಲ್ಲದ ಪುಳಕಗಳು
ನನ್ನ ತುಂಬಾ......
Good one.. Keep Writing veena...
ReplyDeleteThanks Geeta..:)
Deleteಬದಲಾದ ಭಾವಗಳು ಚೆನ್ನಾಗಿವೆ ವೀಣಾ......... :)
ReplyDeleteಧನ್ಯವಾದ ಉಷಾರವರೆ..
Deleteಇದು ಆರಂಭ, ಒಲುಮೆ ಯಾತ್ರೆಗೆ ಇದು ಮುನ್ನುಡಿ. ನೂರ್ಕಾಲ ನಗುನಗುತಾ ಬಾಳಿ.
ReplyDelete"ರಾಘವೇಂದ್ರ ರಾಘವೇಂದ್ರ ಎನ್ನಿರಿ
ನಾಮಸ್ಮರಣೆಯಿಂದ ನಿಜಾನಂದವನ್ನು ಹೊಂದಿರಿ"
ಹೊಸ ಬದುಕು ಹೊಸ ಅಲೆಗಳು.. ಒಂದಕ್ಕಿಂತ ಒಂದು ಚಂದ.
Delete:-D :-)ಒಳ್ಳೆಯ ಸಲಹೆ :-P
ಧನ್ಯವಾದ..
ಏನೇನೋ ತುಂಬಾ ಬದಲಾವಣೆಗಳು......
ReplyDeleteಬದುಕಿನಲ್ಲಿ ಬರಹದಲ್ಲಿ ಭಾವದಲ್ಲಿ... ಎಲ್ಲೆಲ್ಲೂ.........
ಸಾಗಲಿ ಸಾಗಲಿ.... ಓದುವ ಖುಷಿ ನಮ್ಮದು.....
ಬದಲಾವಣೆ ಜಗ ನಿಯಮ..
Deleteಸಾಗುತಿದೆ ಬದುಕು ಹಾಗೆ ಸುಮ್ಮನೆ ...
ಧನ್ಯವಾದ ರಾಘುಜೀ..